ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​- ಯುವಕ-ಯುವತಿ ವಿರುದ್ಧ ಪ್ರಯಾಣಿಕರ ಆಕ್ರೋಶ

    ಮಂಗಳೂರು(ಬೆಂಗಳೂರು): ನಮ್ಮ ಮೆಟ್ರೋ ರಾಜಧಾನಿ ಬೆಂಗಳೂರಿನ ಅತಿ ವೇಗದ ಸಂಪರ್ಕ ಸಾರಿಗೆಯಾಗಿದೆ. ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮಗೆ ದೂರು ನೀಡಿದ್ದಾರೆ. ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.

    ಖಾತೆ ಮೂಲಕ ಪೋಸ್ಟ್​​​ ಮಾಡಲಾಗಿದ್ದು “ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​ಗೆ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ.

    LEAVE A REPLY

    Please enter your comment!
    Please enter your name here