ಮಂಗಳೂರು(ಬೆಂಗಳೂರು): ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣರಾಗಿರುವವರು ಹಾಗೂ ಪರೀಕ್ಷೆ-1 ರಲ್ಲಿ ಉತ್ತೀರ್ಣಗೊಂಡು ಅಂಕ ಹೆಚ್ಚಿಸಿಕೊಳ್ಳಲು ಬಯಸುವವರು, ಎಸೆಸೆಲ್ಸಿ ಪರೀಕ್ಷೆ-2 ಬರೆಯಲು ಅವಕಾಶವಿದೆ. ಪರೀಕ್ಷೆ-2 ನೋಂದಣಿಗೆ ಮೇ16ರವೆರೆಗೆ ಅವಕಾಶ ನೀಡಲಾಗಿದೆ. ಎಸೆಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು, ಜೂ.7ರಿಂದ ಜೂ.14ರವರೆಗೂ ನಡೆಯಲಿದೆ.
ಪರೀಕ್ಷೆ-2ರ ವೇಳಾಪಟ್ಟಿ: ಜೂ.7ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ತಮಿಳು, ಹಿಂದಿ, ಮರಾಠಿ, ಉರ್ದು, ಸಂಸ್ಕೃತ, ಇಂಗ್ಲಿಷ್, ಇಂಗ್ಲಿಷ್(ಎನ್‍ಸಿಇಆರ್‍ಟಿ) ಭಾಷಾ ಪರೀಕ್ಷೆಗಳು ನಡೆಯಲಿವೆ. ಜೂ.8ರಂದು ತೃತೀಯ ಭಾಷೆ ಹಿಂದಿ, ಹಿಂದಿ(ಎನ್‍ಸಿಇಆರ್‍ಟಿ), ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಜೂ.10ರಂದು ಗಣಿತ, ಸಮಾಜ ಶಾಸ್ತ್ರ, ಜೂ.11 ಅರ್ಥಶಾಸ್ತ್ರ, ಜೂ.12 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಜೂ.13ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಜೂ.14ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.