ಮಂಗಳೂರು(ಬೆಂಗಳೂರು): ವಿಧಾನ ಪರಿಷತ್ತಿನ ಮೂರು ಪದವೀಧರರು ಮತ್ತು ಮೂರು ಶಿಕ್ಷಕರ ಸ್ಥಾನಗಳಿಗೆ ಜೂನ್ 3ಕ್ಕೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಲಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಮೇ 16ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮೇ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರ ಬೆಳಗ್ಗೆ 8ಗಂಟೆಯಿಂದ 4ಗಂಟೆಯ ವರೆಗೆ ಮತದಾನ ನಡೆಯಲಿದೆ. ಜೂನ್ 6ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಕರ್ನಾಟಕ ಈಶ್ಯಾನ್ಯ, ನೈಋತ್ಯ, ಬೆಂಗಳೂರು ಪದವೀಧರರ ಹಾಗೂ ಕರ್ನಾಟಕ ಆಗ್ನೇಯ, ನೈಋತ್ಯ ಹಾಗೂ ಬೆಂಗಳೂರು ದಕ್ಷಿಣ ಶಿಕ್ಷಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆ ಬೆನ್ನಿಗೆ ಪರಿಷತ್ ಚುನಾವಣೆ ಎದುರಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಮುಖಂಡರು ಕಸರತ್ತು ನಡೆಸಿದ್ದಾರೆ.