ಮಂಗಳೂರು(ಕೊಡಗು): ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 9ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಬಳಿಕ ಆರೋಪಿ ಪರಾರಿ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸಿದ್ದು, ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.