ಮಂಗಳೂರು(ಬೆಂಗಳೂರು): ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.
ಆಸ್ಪತ್ರೆ ಪ್ರಕಾರ ಕೃಷ್ಣ ಅವರ ಆರೋಗ್ಯ ಸ್ಥೀರವಾಗಿದ್ದು ಚಿಕಿತ್ಸೆಗೆ ಸಾಕಷ್ಟು ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆ ತಿಳಿಸಿದೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಕೃಷ್ಣ ಅವರನ್ನು ಏಪ್ರಿಲ್ 29ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್ ಕಾರಂತ್ ನೇತೃತ್ವದ ವೈದ್ಯರ ತಂಡವು ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ.