ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ-ಭಾರತೀಯ ಹವಾಮಾನ ಇಲಾಖೆ

ಮಂಗಳೂರು(ಬೆಂಗಳೂರು): ಇಂದು ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಗುಡುಗು-ಮಿಂಚು ಸಹಿತ 40 ರಿಂದ 50 ಕಿಮೀ ವೇಗದ ಗಾಳಿ ಬೀಸಬಹುದು ಎಂದು ಐಎಂಡಿ ಹೇಳಿದೆ. ಕೊಡಗು, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ, ಬಳ್ಳಾರಿ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ರಾಜ್ಯದಲ್ಲಿ ಸುರಿದ ಮಳೆಗೆ ಕೆಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಆಲಿಕಲ್ಲು ಮಳೆಗೆ ಬೆಳೆಗಳು ನಾಶವಾಗಿವೆ.

 

LEAVE A REPLY

Please enter your comment!
Please enter your name here