ಮಂಗಳೂರು: ಮಂಗಳೂರಿನ ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ದಾಳಿ ನಡೆಸಿದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳು ನಿಷೇದಿತ ಮಾದಕ ವಸ್ತು ಎಂ ಡಿ ಎಂ ಎ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ವ್ಯಕ್ತಿಯನ್ನು ಪೆರ್ಮನ್ನೂರ ಗ್ರಾಮದ ನಿತ್ಯಾಧರ ಚರ್ಚ್ ಬಳಿ ದಾರಂದ ಬಾಗಿಲು ಮನೆ ನಿವಾಸಿ ದಾವೂದು ಪರ್ವೇಜ್(37) ಎಂದು ಗುರುತಿಸಲಾಗಿದೆ.
ಬಂಧಿತನಿಂದ 10 ಗ್ರಾಂ ತೂಕದ ಎಂ ಡಿ ಎಂ ಎ ಮತ್ತು 810 ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯ.ಎನ್.ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐ ಅರುಣ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.