ವಿಮಾನ ಹತ್ತದೆ ಜರ್ಮನಿಯಲ್ಲೇ ಉಳಿದುಕೊಂಡ ಪ್ರಜ್ವಲ್-ವಿದೇಶದಲ್ಲಿ ಕುಳಿತು ಕಣ್ಣಾಮುಚ್ಚಾಲೆ ಆಟ ಮುಂದುವರಿಕೆ

ಮಂಗಳೂರು(ಬೆಂಗಳೂರು): ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಪೂರಕವೆಂಬಂತೆ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ಗಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ, ಕೊನೆ ಕ್ಷಣದಲ್ಲಿ ಮತ್ತೊಮ್ಮೆ ಜಮರ್ನಿಯಿಂದ ವಿಮಾನ ಹತ್ತದೇ ಅಲ್ಲೇ ಉಳಿದುಕೊಂಡಿದ್ದಾರೆ. ಈ ಮೂಲಕ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ಅವರು ಜರ್ಮನ್ ಕಾಲಮಾನದ ಪ್ರಕಾರ ಇಂದು (ಮೇ 15) 12.20ರ ವಿಮಾನದ ಟಿಕೆಟ್​ ಬುಕ್ ಮಾಡಿದ್ದರು. ಆದ್ರೆ, ಪ್ರಜ್ವಲ್​ ಕೊನೆ ಕ್ಷಣದಲ್ಲಿ ವಿಮಾನ ಹತ್ತದೇ ಮತ್ತೊಮ್ಮೆ ಬೆಂಗಳೂರು ಪ್ರಯಾಣವನ್ನು ರದ್ದು ಮಾಡಿದ್ದಾರೆ. ಪ್ರಜ್ವಲ್ ಬುಕ್ ಮಾಡಿದ್ದ ವಿಮಾನ ಈಗಾಗಲೇ ಜರ್ಮಿನಿಂದ ಟೇಕಾಫ್ ಆಗಿದೆ. ಆದ್ರೆ, ಪ್ರಜ್ವಲ್ ವಿಮಾನದಲ್ಲಿ ಬೋರ್ಡಿಂಗ್ ಆಗದೆ ಅಲ್ಲೇ ಉಳಿದುಕೊಂಡಿದ್ದಾರೆ. ಪ್ಯಾಸೆಂಜರ್ ಲಿಸ್ಟ್​ನಲ್ಲಿ ಪ್ರಜ್ವಲ್​ ರೇವಣ್ಣ ಅವರ ಹೆಸರು ಸಹ ಇಲ್ಲ ಎಂದು ತಿಳಿದುಬಂದಿದೆ. ಈಗಾಗಲೇ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಆಚೆ ಬಂದಿರುವ ಶಾಸಕ ಎಚ್​ಡಿ ರೇವಣ್ಣ ಇದೀಗ ಪುತ್ರ ಪ್ರಜ್ವಲ್ ಪ್ರಕರಣದ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಈ ಸಂಬಂಧ ಇಂದು ರೇವಣ್ಣ ಅವರು ಹಿರಿಯ ವಕೀಲ ಹಿರಿಯ ವಕೀಲ ಸಿ.ವಿ.ನಾಗೇಶ್​ ಅವರನ್ನು ಭೇಟಿ ಮಾಡಿ ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡುತ್ತಿದ್ದಾರೆ. ಇಂದು ಸಹ ಕೊನೇ ಕ್ಷಣದಲ್ಲಿ ವಿಮಾನ ಹತ್ತದೇ ಬೆಂಗಳೂರಿಗೆ ಬರದೇ ಜರ್ಮನಿಯಲ್ಲೇ ಉಳಿದುಕೊಂಡಿದ್ದಾರೆ. ಇದರೊಂದಿಗೆ ಎರಡು ಬಾರಿ ಬುಕ್ ಮಾಡಿದ್ದ ಟಿಕೆಟ್​ ಕ್ಯಾನ್ಸಲ್ ಮಾಡಿಕೊಂಡು ​ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಇದರಿಂದ ಇತ್ತ ದಾರಿ ಕಾಯುತ್ತಿರುವ ಎಸ್​ಐಟಿ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪದೇ ಪದೇ ಟಿಕೆಟ್​ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡುತ್ತಿರುವುದರಿಂದ ಮುಂದೆ ಏನು ಮಾಡಬೇಕು ಎಂದು ಎಸ್​ಐಟಿ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here