ಮಂಗಳೂರು: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು ಕೂಡ ಒಂದು. ಸ್ಮಾರ್ಟ್ ಸಿಟಿಯಾಗಿರುವ ಈ
ಮಂಗಳೂರು ನಗರ ಇನ್ಮುಂದೆ ಅತ್ಯಾಧುನಿಕ ಕ್ಯಾಮರಾ ಹಾಗೂ ರಾಡಾರ್ ಕಣ್ಗಾವಲಿಗೆ ಒಳಪಡಲಿದೆ.
ನಗರದ ಸಂಚಾರಿ ಪೊಲೀಸರಿಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಮೂಗುದಾರ ಹಾಕುವುದೇ ಪ್ರತಿದಿನ ಸವಾಲಾಗಿ ಪರಿಣಮಿಸಿದೆ. ಇದಕ್ಕಾಗಿಯೇ ಸ್ಮಾರ್ಟ್ ನಗರದಲ್ಲಿ ಸ್ಮಾರ್ಟ್ ತಂತ್ರಜ್ಞಾನಗಳನ್ನು ಜಾರಿಗೆ ತರಲಾಗುತ್ತಿದೆ. ಈಗಾಗಲೇ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಹೊಂದಿರುವ ಕ್ಯಾಮರಾ ಹಾಗೂ ರಾಡಾರ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಸ್ಮಾರ್ಟ್ ವಾಹನ ಚಾಲಕರು ಇನ್ನುಮುಂದೆ ಜಾಗೃತರಾಗಿರಬೇಕಾಗಿದೆ. ಸಂಚಾರಿ ಪೊಲೀಸರಿಂದ ತಪ್ಪಿಸಿಕೊಂಡರೂ ರಾಡಾರ್ ಕಣ್ಣಿನಿಂದ ತಪ್ಪಿಸಿಕೊಳ್ಳುವುದು ಕಷ್ಟ.