ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ-ಸಿಎಂ ಸೂಚನೆ 

ಮಂಗಳೂರು(ಬೆಂಗಳೂರು): ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡದಂತೆ ಸಿಎಂ ಸಿದ್ದರಾಮಯ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದರು. ಅಷ್ಟೊಂದು ಹೆಚ್ಚಿನ ಗ್ರೇಸ್ ಮಾರ್ಕ್ ನೀಡುವ ಅಗತ್ಯ ಇತ್ತಾ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಅಧಿಕಾರಿಗಳ ಬಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧದ ಬಗ್ಗೆ ಚರ್ಚೆ ನಡೆಯಿತು. ಶಿಕ್ಷಣ ಇಲಾಖೆಯಿಂದಲೂ ಗ್ರೇಸ್ ಮಾರ್ಕ್ಸ್​ಗೆ ಸಾಕಷ್ಟು ವಿರೋಧ ಬರ್ತಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ವೇಳೆ ಸಿಎಂ ಮಧ್ಯಪ್ರವೇಶ ಮಾಡಿ, ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಎಸ್‌ಎಸ್‌ಎಲ್‌ಸಿಯಲ್ಲಿ ಗ್ರೇಸ್ ಮಾರ್ಕ್ಸ್ ಕೊಡೋದು ಅಗತ್ಯ ಇತ್ತಾ? ಎಂದು ಪ್ರಶ್ನೆ ಮಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡುವಂತೆ ಸೂಚಿಸಿದರು.

ಎಸ್‌ಎಸ್‌ಎಲ್‌ಸಿಯಲ್ಲಿ 20% ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡುವ ತೀರ್ಮಾನ ಮಾಡಲಾಗಿತ್ತು. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರಲ್ಲ. ಪರೀಕ್ಷಾ ನಡವಳಿಕೆ ಸರಿ ಮಾಡಲು ಮುಂದಾಗಿದ್ದೆವು. ಸಿಎಂ ಇದರ ಬಗ್ಗೆ ಸಭೆಯಲ್ಲಿ ಮಾಹಿತಿ ಕೇಳಿದ್ರು. ಯಾವಾಗಲೂ ಶೇ5ರಷ್ಟು ಇತ್ತು. ಕೋವಿಡ್ ವೇಳೆ ಶೇ10ರಷ್ಟು ಮಾಡಲಾಗಿತ್ತು. ಕಾನ್ಫಿಡೆಂಟ್ ಕೊಟ್ಟು ಪಾಸ್ ಮಾಡಲು ನಿರ್ಧರಿಸಲಾಗಿತ್ತು. ಹಾಗಾಗಿ 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು ಎಂದರು. ಈ ವರ್ಷಕ್ಕೆ ಯಾವ ಸಮಸ್ಯೆಯೂ ಇಲ್ಲ. ಮುಂದಿನ ವರ್ಷದಿಂದ ಇದು ಇರಲ್ಲ. ಮಕ್ಕಳನ್ನು ಇಂಪ್ರೂವ್ ಮಾಡೋಕೆ ಇದನ್ನ ಮಾಡಿದ್ದೆವು. ಹಾಗಾಗಿ ಇದು ಬೇಡ ಅನ್ನೋದು ಇದೆ. ಹಾಗಾಗಿ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರಲ್ಲ. ಗ್ರೇಸ್ ಮಾರ್ಕ್ಸ್ ನಿಂದ ಮಕ್ಕಳಲ್ಲಿ ಇಂಫ್ರೂವ್​ಮೆಂಟ್ ಇತ್ತು.‌ ಆದರೆ ಈಗ ಬೇಡ ಅನ್ನೋ ನಿಲುವಿಗೆ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ ಶೇ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯೇ ಮುಂದುವರೆಯಲಿದೆ ಎಂದು ತಿಳಿಸಿದರು‌.

LEAVE A REPLY

Please enter your comment!
Please enter your name here