



ಮಂಗಳೂರು: ಕಳೆದ 11 ತಿಂಗಳಲ್ಲಿ ಕರ್ನಾಟಕದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ರಾಜ್ಯ ಗೂಂಡಾ ರಾಜ್ಯದಂತಾಗಿದೆ. ಅಸಮರ್ಥ ರಾಜ್ಯದ ಗೃಹಸಚಿವ ಪರಮೇಶ್ವರ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ರಾಜ್ಗೋಪಾಲ್ ರೈ ಆಗ್ರಹಿಸಿದ್ದಾರೆ.







ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ರಾಜ್ಗೋಪಾಲ್ ರೈ, ಹುಬ್ಬಳ್ಳಿಯ ನೇಹಾ ಹತ್ಯೆ, ಅಂಜಲಿ ಪ್ರಕರಣ, ಬೆಳಗಾವಿಯಲ್ಲಿ ದಲಿತ ಮಹಿಳೆಯರ ವಿವಸ್ತ್ರಗೊಳಿಸಿದ ಘಟನೆಯಿಂದಾಗಿ ರಾಜ್ಯ ಸರಕಾರವು ಜನರನ್ನು ಭಯದ ವಾತಾವರಣದಲ್ಲಿ ಬದುಕುವ ದಾರುಣ ಸ್ಥಿತಿಗೆ ತಲುಪಿಸಿದೆ. ಸಿಸಿಬಿ ಮತ್ತು ಎನ್ಸಿಬಿ ಪ್ರಕಾರ ಕಳೆದ 11 ತಿಂಗಳಲ್ಲಿ ಶೇ.60ಕ್ಕಿಂತ ಹೆಚ್ಚು ಕ್ರಿಮಿನಲ್ ಚಟುವಟಿಕೆ ದಾಖಲಾಗಿದೆ. ಕರ್ನಾಟಕವು ಕೊಲೆಗಡುಕರ, ಗೂಂಡಾ ರಾಜ್ಯವಾಗಿ ಪರಿವರ್ತನೆಗೊಂಡಿದೆ. ರಾಜ್ಯದ ಗೃಹಸಚಿವರು ಕೂಡಲೇ ರಾಜಿನಾಮೆ ನೀಡಬೇಕು. ಈ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದು ಅವರು ಹೇಳಿದ್ದಾರೆ.



ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ












