ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಈ ಚುನಾವಣೆಯ ಮೇಲೂ ಸತ್ಪರಿಣಾಮ ಬೀರಲಿದೆ-ಮಂಜುನಾಥ್ ಭಂಡಾರಿ

ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರವು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯನ್ನು ಒಳಗೊಂಡಿವೆ. 30 ಶಾಸಕರು ಈ 6 ಜಿಲ್ಲೆಗಳನ್ನು ಪ್ರತಿನಿಧಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು, 15 ಬಿಜೆಪಿ, 14 ಕಾಂಗ್ರೆಸ್, 1 ಜೆಡಿಎಸ್ ಶಾಸಕರಿದ್ದಾರೆ. 83 ಸಾವಿರ ಪದವೀಧರ ಮತ್ತು 25 ಸಾವಿರ ಶಿಕ್ಷಕರು ಮತದಾನದ ಹಕ್ಕುಗಳನ್ನು ಹೊಂದಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಈ ಚುನಾವಣೆಯ ಮೇಲೂ ಸತ್ಪರಿಣಾಮ ಬೀರಲಿದೆ. ನೈರುತ್ಯ ಸಹಿತ ಎಲ್ಲಾ 6 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಡಿಸಿಸಿ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here