ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ

ಮಂಗಳೂರು(ಬೆಂಗಳೂರು): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು(ಮೇ 21) ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದು, ಫಲಿತಾಂಶ ಇಂದು (ಮೇ 21)ಮಧ್ಯಾಹ್ನ 3 ಗಂಟೆಗೆ ಹೊರ ಬೀಳಲಿದೆ. ವಿಶೇಷ ಎಂದರೆ ಈ ಶೈಕ್ಷಣಿಕ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.ಫಲಿತಾಂಶವನ್ನು ಇಂದು ಮಧ್ಯಾಹ್ನ 03 ಗಂಟೆ ಬಳಿಕ https://karresults.nic.in ವೆಬ್​​ಸೈಟ್​ನಲ್ಲಿ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

ಫಲಿತಾಂಶ ನೋಡುವುದು ಹೇಗೆ?

karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

LEAVE A REPLY

Please enter your comment!
Please enter your name here