ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ-ದೂರು ದಾಖಲು

ಮಂಗಳೂರು(ದಾವಣಗೆರೆ): ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here