ಪ್ರಜ್ವಲ್ ಲೈಂಗಿಕ ಹಗರಣ-ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊಫೆಸರ್ ರವಿವರ್ಮ ಕುಮಾರ್ ನೇಮಕ

ಮಂಗಳೂರು(ಬೆಂಗಳೂರು): ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿದೆ.‌

ರವಿವರ್ಮ ಕುಮಾರ್ ಅವರು ಈ ಹಿಂದೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2013ರಿಂದ 2015ರವರೆಗೆ ಕರ್ನಾಟಕದ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಎಸ್‌ಪಿಪಿಯಾಗಿ ಬಿ.ಎನ್.ಜಗದೀಶ ಅವರನ್ನು ನೇಮಿಸಲಾಗಿತ್ತು. ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ.

LEAVE A REPLY

Please enter your comment!
Please enter your name here