ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಮಂಗಳೂರು(ಬೆಂಗಳೂರು): ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ಕೇಳಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿಯಲ್ಲ ಎಂದು ಪೂಂಜಾರಿಗೂ ಗೊತ್ತಾಗಿದೆ. ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ ಹೊಣೆ ಆಗುತ್ತದೆ. ಪೊಲೀಸರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಹದಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ. ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರನ್ನು ಬಂಧಿಸಲು ಮುಂದಾಗುವುದನ್ನು ಕೈಬಿಡಬೇಕು. ಗೃಹ ಸಚಿವರು ಎಸ್ಪಿ ಜೊತೆ ಮಾತನಾಡಿ ಸೂಚನೆ ಕೊಡಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ  ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದು ವಾದ ವಿವಾದ ಮುಂದುವರಿದಿದೆ.

LEAVE A REPLY

Please enter your comment!
Please enter your name here