ಮಂಗಳೂರು(ಗುಜರಾತ್): ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ 24 ಮಂದಿ ಸಜೀವ ದಹನಗೊಂಡಿದ್ದಾರೆ. ಬೆಂಕಿ ಅವಘಡದ ನಂತರ ಇಡೀ ಆಟದ ವಲಯ ಸುಟ್ಟು ಬೂದಿಯಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಸುಮಾರು 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯ ಜೊತೆಗೆ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ನಡೆಯುತ್ತಿದೆ.
ಮಧ್ಯಾಹ್ನ ಟಿಆರ್‌ಪಿ ಗೇಮಿಂಗ್ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಸಾಧ್ಯವಾದಷ್ಟು ಮೃತ ದೇಹಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಇದುವರೆಗೆ ಸುಮಾರು 24 ಮೃತದೇಹಗಳು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗೇಮಿಂಗ್ ವಲಯದ ಮಾಲೀಕರು ಯುವರಾಜ್ ಸಿಂಗ್ ಸೋಲಂಕಿ ವಿರುದ್ಧ ನಿರ್ಲಕ್ಷ್ಯ ಕುರಿತಂತೆ ಪ್ರಕರಣ ದಾಖಲಿಸುತ್ತೇವೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ನಂತರ ಇಲ್ಲಿ ಹೆಚ್ಚಿನ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.
ಎಎನ್‌ಐ ವರದಿಯ ಪ್ರಕಾರ, ಬೆಂಕಿ ಎಷ್ಟು ತೀವ್ರವಾಗಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರದಿಂದ ಗೋಚರಿಸುತ್ತದೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ. ಆದಷ್ಟು ಬೇಗ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.