ವಿಧಾನ ಪರಿಷತ್ ಚುನಾವಣೆ-ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ 

ಮಂಗಳೂರು: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯಲಿದ್ದು ಪಕ್ಷೇತರ ಅಭ್ಯರ್ಥಿಯಾಗಿ ಹೃದ್ರೋಗ ತಜ್ಞ ಮತ್ತು ಮೆಡಿಕಲ್ ಕಾಲೇಜು ಶಿಕ್ಷಕರಾಗಿರುವ ಹೇಬ್ರಿಬೀಡು ಡಾ.ನರೇಶ್ಚಂದ್ ಹೆಗ್ಡೆ ಸ್ಪರ್ಧಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಜೊತೆಗೆ ಈಗಾಗಲೇ ಚರ್ಚೆ ಮಾಡಿದ್ದು ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಮುಂದಾಗಿದ್ದೇನೆ. ಸುಶಿಕ್ಷಿತ ಮತದಾರರು ಇರುವ ಕಾರಣ ಎಲ್ಲರ ವಿಶ್ವಾಸ ಗಳಿಸಿಕೊಂಡು ಸೇವೆ ಸಲ್ಲಿಸಲು ಆಸಕ್ತಿ ಹೊಂದಿದ್ದೇನೆ. ನೈರುತ್ಯ ಶಿಕ್ಷಕರ ಕ್ಷೇತ್ರ ರಚನೆಯಾದ ಬಳಿಕ ಒಂದೆರಡು ಸಂದರ್ಭ ಹೊರತುಪಡಿಸಿ ರಾಜಕಾರಣಿಗಳು, ಶಿಕ್ಷಕರೇ ಅಲ್ಲದವರು ಚುನಾಯಿತರಾಗಿರುವುದು ವಿಪರ್ಯಾಸವಾಗಿದೆ ಎಂದರು.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 22 ಸಾವಿರಕ್ಕೂ ಅಧಿಕ ಮಂದಿ ಶಿಕ್ಷಕರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾಲೂಕುಗಳು ವ್ಯಾಪ್ತಿಗೆ ಒಳಪಟ್ಟಿದ್ದು ಶಿಕ್ಷಕರ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ದುಡಿಯುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here