ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಮಂಗಳೂರು(ಬೆಂಗಳೂರು): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ  ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು. ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದಳು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here