ಮಂಗಳೂರು(ಮಿಜೋರಾಂ): ಕಲ್ಲು ಗಣಿಗಾರಿಕೆಯಲ್ಲಿ ಉಂಟಾದ ಕುಸಿತದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿ, ಹಲವರು ನಾಪತ್ತೆಯಾಗಿರುವ ಘಟನೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಭಾರೀ ಮಳೆಯ ನಡುವೆ ಈ ಕುಸಿತ ಸಂಭವಿಸಿದ್ದು, ಗಣಿ ಕುಸಿತದಿಂದ ಅಕ್ಕಪಕ್ಕದ ಹಲವು ಮನೆಗಳೂ ನಾಶವಾಗಿವೆ. ಮೃತರ ಶವಗಳನ್ನು ಹೊರತೆಗೆಯಲಾಗಿದೆ. ಆದರೂ, ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ವಾರಿ ಕುಸಿತದ ಜೊತೆಗೆ, ರೆಮಲ್ ಚಂಡಮಾರುತವು ಮಿಜೋರಾಂನಾದ್ಯಂತ ಹಾನಿಯನ್ನುಂಟು ಮಾಡಿದೆ.