ಮಂಗಳೂರು: ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿ ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದ್ದು, ಮಸೀದಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಹೇಳಿರುವ ವಿಶ್ವ ಹಿಂದೂ ಪರಿಷತ್, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೃತ್ಯವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಮಂಗಳೂರಿನ ಕಂಕನಾಡಿ ಮಸೀದಿ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕುಳಿತು ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ ಮಾಧ್ಯಮಗಳಲ್ಲಿಯೂ ಪ್ರಸಾರವಾಗಿದೆ.
.