ಸಹಾಯ ಮಾಡುವ ನೆಪದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಅತ್ಯಾಚಾರ – ಕೇರಳದ ವ್ಯಕ್ತಿ ಅರೆಸ್ಟ್

ಮಂಗಳೂರು: ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಹಕರಿಸುವ ನೆಪದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ  ಆಸ್ಪತ್ರೆ, ಲಾಡ್ಜ್‌ನಲ್ಲಿ ಅತ್ಯಾಚಾರಗೈದ ಆರೋಪದಲ್ಲಿ ಮಂಗಳೂರು ಕದ್ರಿ ಪೊಲೀಸರು ಕೇರಳದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಕೇರಳದ ಹೊಸದುರ್ಗದ, ಪುಲ್ಲೂರು ನಿವಾಸಿ ಸುಜಿತ್ ಬಂಧಿತ ಆರೋಪಿ. ಕಾಸರಗೋಡು ಮೂಲದ ಸಂತ್ರಸ್ತೆ ಮಾ.13ರಂದು ಪಿಸ್ತೂಲ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಸುಜಿತ್ ನೊಂದಿಗೆ ಬಂದಿದ್ದರು. ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ರೂಮ್ ಸಂಖ್ಯೆ 48ರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ.16ರಂದು ರಾತ್ರಿ ವೇಳೆ ಸುಜಿತ್ ಬಲವಂತವಾಗಿ ಮಹಿಳೆಯ ಬಟ್ಟೆಗಳನ್ನು ತೆಗೆದು ಅತ್ಯಾಚಾರ ಮಾಡಿ ಆಕೆಯ ನಗ್ನ ಫೋಟೋಗಳನ್ನು ಸೆರೆ ಹಿಡಿದಿದ್ದನು. ಎ.4ರಂದು ಈ ನಗ್ನ ಪೋಟೋಗಳನ್ನು ಆಕೆಗೆ ತೋರಿಸಿದ ಆರೋಪಿ ಸುಜಿತ್ ಮತ್ತೆ ಮಂಗಳೂರಿಗೆ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಬಂದಿದ್ದಾನೆ. ಎ.4 ರಿಂದ 8 ರವರೆಗೆ ನಗರದ ಮಹಾರಾಜಾ ರೆಸಿಡೆನ್ಸಿ ಹೋಟೆಲ್ ನಲ್ಲಿ ಇದ್ದುಕೊಂಡು ಆಕೆಯನ್ನು ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಮತ್ತೆ ನಗ್ನ ಪೋಟೋಗಳನ್ನು ತೆಗೆದುಕೊಂಡಿದ್ದ. ಅನಾರೋಗ್ಯದ ಹಿನ್ನೆಲೆಯಲ್ಲಿ ಎ. 8ರಿಂದ ಮೇ 10ರವರಿಗೆ ಮಂಗಳೂರಿನ ಫಾದರ್ ಮುಲ್ಲಾರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅಲ್ಲಿಯೂ ಸುಜಿತ್ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ, ಈ ವಿಚಾರ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸಂತ್ರಸ್ತ ಮಹಿಳೆ ಪೊಲೀಸ್‌ರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಕದ್ರಿ ಪೊಲೀಸರು ಆರೋಪಿ ಸುಜಿತ್‌ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here