ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಮಂಗಳೂರು(ಬಂಟ್ವಾಳ): ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಘಟನಾ ಸ್ಥಳಕ್ಕೆ ಆಗಮಿಸಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

 

 

LEAVE A REPLY

Please enter your comment!
Please enter your name here