ಮಂಗಳೂರು(ಉತ್ತರ ಪ್ರದೇಶ): ಇತ್ತೀಚಿನ ದಿನಗಳಲ್ಲಿ ಮಾನವೀಯತೆ ಎಂಬುದು ಮರೆಯಾಗಿ ಹೋಗುತ್ತಿದ್ದು, ಜನರು ಮೃಗೀಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇದಕ್ಕೆ ಸೂಕ್ತ ಉದಾಹರಣೆ ಎನ್ನುವಂತಹ ವಿಡಿಯೋವೊಂದು ವೈರಲ್ ಆಗುತ್ತಿದೆ. ಮದ್ಯ ತುಂಬಿದ್ದ ಲಾರಿ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರೂ ಆತನಿಗೆ ಸಹಾಯಹಸ್ತ ನೀಡುವ ಬದಲು ರಸ್ತೆಯಲ್ಲಿ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಎತ್ತಿಕೊಂಡು ಹೋಗಿದ್ದಾರೆ. ಈ ಮೂಲಕ ಜನರು ಮಾನವೀಯತೆ ಸತ್ತಂತೆ ವರ್ತಿಸಿದ್ದು, ನೆಟ್ಟಿಗರು ಖೇದ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಎಂಬಲ್ಲಿ ನಡೆದಿದ್ದು, ವಿದೇಶಿ ಮತ್ತು ಸ್ವದೇಶಿ ಮದ್ಯ ತುಂಬಿದ್ದ ಡಿಸಿಎಂ ಟ್ರಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಕ್‌ನಲ್ಲಿದ್ದ ಮದ್ಯದ ಬಾಟಲಿಗಳೆಲ್ಲವೂ ರಸ್ತೆಗುರುಳಿ ಬಿದ್ದಿವೆ. ಈ ಸಂದರ್ಭದಲ್ಲಿ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಚಾಲಕನ ಸಹಾಯಕ್ಕೆ ಧಾವಿಸದೆ ರಸ್ತೆಯಲ್ಲಿ ಬಿದ್ದ ಮದ್ಯದ ಬಾಟಲಿಗಳನ್ನು ಎತ್ತಿಕೊಂಡು ಹೋಗುವ ಮೂಲಕ ಮಾನವೀಯತೆ ಸತ್ತಂತೆ ವರ್ತಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಅಲ್ಲಿನ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಚಾಲಕನ ಸಹಾಯಕ್ಕೂ ಧಾವಿಸದೇ ಮದ್ಯದ ಬಾಟಲಿಗಳನ್ನು ಎತ್ತಿಕೊಳ್ಳುವುದರಲ್ಲಿ ನಿರತರಾಗಿರುವ ಅಮಾನವೀಯ ದೃಶ್ಯವನ್ನು ಕಾಣಬಹುದು.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
https://x.com/i/status/1794556630538805354