ಮಂಗಳೂರು: ಮಂಗಳೂರು ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿ.ಎಚ್.ಪಿ ಮುಖಂಡ ಶರಣ್ ಪಂಪ್ವೆಲ್ ಮೇಲೆ ಪೊಲೀಸರು ಎಫ್.ಐ.ಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶರಣ್ ಪಂಪ್ವೆಲ್ ಮೇಲೆ ಎಫ್.ಐ.ಆರ್ ದಾಖಲಿಸಿರುವುದನ್ನು ಖಂಡಿಸಿದ ವಿ ಎಚ್ ಪಿ ಕಾರ್ಯಕರ್ತರು ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಕೂಗಿದರು. ಪ್ರತಿಭಟನೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.