ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ – ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು (ಉಡುಪಿ): ಉಡುಪಿಯ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ, ಮಹಿಳಾ ಸಹೋದ್ಯೋಗಿಗೆ ರಾತ್ರಿಯಾದರೆ ವಿಡಿಯೊ ಕಾಲ್‌ ಮಾಡುವುದು, ಅಶ್ಲೀಲ ಸಂದೇಶ ರವಾನಿಸಿ ಕಿರುಕುಳ ನೀಡುತ್ತಿದ್ದು ಸಂತ್ರಸ್ತೆ ವೈದ್ಯೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ವಿರುದ್ಧ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು ವೈದ್ಯಾಧಿಕಾರಿ ವಿರುದ್ಧ ದೂರು ದಾಖಲಾಗಿದೆ.

ಕಳೆದ ಆರು ತಿಂಗಳಿನಿಂದ ತಾಲೂಕು ಆಸ್ಪತ್ರೆಯ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಮಹಿಳೆ ಎನ್ಆರ್‌ಸಿ ವಿಭಾಗದಲ್ಲಿ ವೈದ್ಯಾಧಿಕಾರಿಯಾಗಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ರಾಬರ್ಟ್‌ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದು, ಡಾ.ರಾಬರ್ಟ್ ರೆಬೆಲ್ಲೋ ಫೋನ್‌ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಾ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕರ್ತವ್ಯದ ಸಮಯ ಮತ್ತು ರಾತ್ರಿ ಮೆಸೇಜ್ ಮಾಡುವುದು, ವಿಡಿಯೋ ಕಾಲ್ ಮಾಡಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here