ಮಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರ ಆತ್ಮಹತ್ಯೆ ಹಾಗೂ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪಿವಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಯುವಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆದು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಚಿವ ನಾಗೇಂದ್ರ ಅವರು ಜೂನ್ 06ರ ಒಳಗೆ ರಾಜೀನಾಮೆ ನೀಡದೆ ಇದ್ದರೆ ರಾಜ್ಯದಾದ್ಯಂತ ಪ್ರಭಟನೆಯ ಎಚ್ಚರಿಕೆ ನೀಡಿದರು.