Home ಇತ್ತೀಚಿನ ಸುದ್ದಿಗಳು ಇಂದಿನಿಂದ ಹೆದ್ದಾರಿ ಟೋಲ್ ಶುಲ್ಕ ಶೇ. 5 ಏರಿಕೆ

ಇಂದಿನಿಂದ ಹೆದ್ದಾರಿ ಟೋಲ್ ಶುಲ್ಕ ಶೇ. 5 ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಇಂದಿನಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ದೇಶಾದ್ಯಂತ ಹೆದ್ದಾರಿ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷವೂ ಏರಿಕೆಯಾಗುತ್ತದೆ. ಇದರಂತೆ ಎಪ್ರಿಲ್ 1 ರಿಂದ ಪರಿಷ್ಕೃತ ಶುಲ್ಕ ಜಾರಿಯಾಗಬೇಕಿತ್ತು. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ವಿಳಂಬವಾಗಿತ್ತು. ಪರಿಷ್ಕೃತ ಶುಲ್ಕ ಜೂ.03 ರಿಂದ (ಇಂದಿನಿಂದ) ಜಾರಿಗೆ ಬರಲಿದೆ ಎಂದು ಎನ್‌ಎಚ್‌ಎಐಯ ಹಿರಿಯ ಅಧಿಕಾರಿಗಳು ತಿಳಿಸಿದ್ದರು. ರಾಷ್ಟ್ರೀಯ ಹೆದ್ದಾರಿ ಜಾಲದಲ್ಲಿ ಸರಿಸುಮಾರು 855 ಟೋಲ್ ಪ್ಲಾಝಾಗಳಿವೆ. ಇವುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ಕಾಯ್ದೆ 2008ಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ.

LEAVE A REPLY

Please enter your comment!
Please enter your name here

error: Content is protected !!