ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿದ ದ.ಕ. ನೂತನ ಸಂಸದ ಬ್ರಿಜೇಶ್ ಚೌಟ

ಮಂಗಳೂರು (ಬೆಂಗಳೂರು): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಿಗೆ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here