ಮಂಗಳೂರು/ಬೆಂಗಳೂರು: ಕರ್ನಾಟಕ ಸಿನಿಮಾ ರೆಗ್ಯೂಲೇಶನ್ ಆಕ್ಟ್ 1964ರ ಸೆಕ್ಷನ್ 15(1) ಮತ್ತು 15(5) ರ ಅಡಿಯಲ್ಲಿ “ಹಮಾರೆ ಬಾರಾಹ್” ಚಿತ್ರದ ಟ್ರೇಲರ್ ಮತ್ತು ಸಿನಿಮಾವನ್ನು ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಾಜ್ಯದ ಯಾವುದೇ ಇಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನೆಲ್ ಗಳು ಮತ್ತು ಇತರ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.
“ಹಮಾರೆ ಬಾರಾಹ್” ಚಲನಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಇದರಲ್ಲಿ ಒಂದು ಧರ್ಮದ ಬಗ್ಗೆ ಪ್ರಚೋದನತ್ಮಾಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಬಂದ ದೂರಿನ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.