ಸುಳ್ಳು ಜಾಹೀರಾತು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು

ಮಂಗಳೂರು/ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮೀಷನ್‌ ಆರೋಪ ಮಾಡಿ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಿದ್ದ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ನೀಡಲಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್‌ ಗಾಂಧಿ ಪರ ವಕೀಲರು ಜಾಮೀನು ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ರಾಹುಲ್‌ ಗಾಂಧಿಗೆ ಜಾಮೀನು ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ರಾಹುಲ್‌ ವಿರುದ್ಧ ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾ. ಕೆ.ಎನ್‌. ಶಿವಕುಮಾರ್‌  ಜೂ. 7ರಂದು ತಪ್ಪದೆ ವಿಚಾರಣೆಗೆ ಹಾಜರಾಗವಂತೆ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿದ್ದರು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೂ.1ರಂದು ನ್ಯಾಯಾಲಯದ ವಿಚಾರಣೆಗೆ ಹಾಜರಾಗಿ ಷರತ್ತುಬದ್ಧ ಜಾಮೀನು ಪಡೆದಿದ್ದರು.

LEAVE A REPLY

Please enter your comment!
Please enter your name here