ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಜೂ. 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ ಸೂಚನೆ ನೀಡಲಾಗಿದೆ. 45ರಿಂದ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜೂ. 11ರ ವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.