ವಕೀಲರ ಸಂಘದಲ್ಲಿ ಶೇ. 33 ಮಹಿಳಾ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಮಂಗಳೂರು/ದೆಹಲಿ: ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್‌ಸಿಬಿಎ) ಕಾರ್ಯಕಾರಿ ಸಮಿತಿಯಲ್ಲಿ ಕನಿಷ್ಟ ಮೂರನೇ ಒಂದರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಕೆ.ವಿ. ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಮೇ 16ರಂದು ಸುಪ್ರೀಂ ಕೋರ್ಟ್‌ ಬಾರ್ ಅಸೋಸಿಯೇಷನ್‌ಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಗೆ ಎರಡು ವಾರಗಳು ಬಾಕಿ ಇರುವಾಗಲೇ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ. ಮುಂಬರುವ ಚುನಾವಣೆಯ ಖಜಾಂಚಿ, ಕಾರ್ಯಕಾರಿ ಸಮಿತಿಯ ಒಂಭತ್ತು ಹುದ್ದೆಗಳಲ್ಲಿ ಮೂರು ಮತ್ತು ಹಿರಿಯ ಕಾರ್ಯಕಾರಿ ಸಮಿತಿ 6 ಸದಸ್ಯರ ಪೈಕಿ ಎರಡು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

LEAVE A REPLY

Please enter your comment!
Please enter your name here