5 ಸಂಕ್ಷಿಪ್ತ ಸುದ್ದಿಗಳು

ಕಾಪು ಬೀಚಿನಲ್ಲಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು/ಕಾಪು: ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ನಾಪತ್ತೆಯಾದ ಯುವಕ ಕರಣ್ ಸಾಲ್ಯಾನ್ (20) ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ವೈದ್ಯ ಮುಂಬೈಯಲ್ಲಿ ಸೆರೆ

ಮಂಗಳೂರು/ಕುಂದಾಪುರ: ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋರನ್ನು ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಗುಜರಾತಿನ ಲಾಡ್ಜ್ ಒಂದರಲ್ಲಿ ಇದ್ದ ವೈದ್ಯರನ್ನು ಬಂಧಿಸಿರುವ ಕುಂದಾಪುರ ಪೊಲೀಸರು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರುತ್ತಿದ್ದಾರೆ. ಡಾ. ರಾಬರ್ಟ್ ರೆಬೆಲ್ಲೋ ಮೇಲೆ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ತನ್ನ ಸಹೋದ್ಯೋಗಿಯಾಗಿದ್ದ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಿವೆ.

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ – ರಾಜ್ಯದ ಎಲ್ಲಾ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ಮೀಸಲು

ಮಂಗಳೂರು/ಉಡುಪಿ: ರಾಜ್ಯದ ಕ್ರೀಡಾಪಟುಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯದ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡಾ 2 ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ, ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ. 

30 ಮಂಗಗಳ ದಾರುಣ ಹತ್ಯೆ : ವ್ಯಾಪಕ ಆಕ್ರೋಶ

ಮಂಗಳೂರು/ಚಿಕ್ಕಮಗಳೂರು: ಅಮಾನುಷವಾಗಿ 30 ಮಂಗಳನ್ನು ಕೊಂದು ರಸ್ತೆ ಬದಿಯಲ್ಲಿ ಎಸೆದಿರುವ ಧಾರುಣ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕು ದ್ಯಾವಣ ಗ್ರಾಮದ ಬಳಿ ನಡೆದಿದೆ. ಈ ಹೀನ ಕೃತ್ಯವನ್ನು ಪ್ರಾಣಿಪ್ರಿಯರು ಖಂಡಿಸಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಾಳೆಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟು ಮಂಗಗಳ ಪ್ರಜ್ಞೆತಪ್ಪಿಸಿರುವ ಕಿಡಿಗೇಡಿಗಳು ಬಳಿಕ ಮಂಗಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ಸಭೆ

ಮಂಗಳೂರು/ಬೆಂಗಳೂರು: ಜೂ. 13ರಂದು ಬೆಳಿಗ್ಗೆ 11 ಗಂಟೆಗೆ 2024ನೇ ಸಾಲಿನ 9ನೇ ಸಚಿವ ಸಂಪುಟ ಸಭೆ ವಿಧಾನ ಸೌಧದ ಸಂಪುಟ ಸಭಾ ಮಂದಿರದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here