ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು/ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.

ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಕಡೂರು ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here