ಇಬ್ಬರಿಗೆ ಚೂರಿ ಇರಿತ – ಮೂವರ ಬಂಧನ – ಘಟನೆ ಖಂಡಿಸಿದ ಸಂಸದ

ಕೊಣಾಜೆ: ಮುಡಿಪು ಸಮೀಪದ ಬೋಳಿಯಾರು ಬಳಿ ತಂಡವೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.‌

ಮೋದಿ ಪದಗ್ರಹಣದ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ವಿಜಯೋತ್ಸವ ಮುಗಿಸಿ ಮನೆಗೆ ಮರಳುವ ಸಂದರ್ಭ ಬೋಳಿಯಾರ್ ಬಾರ್ ಮುಂಭಾಗದಲ್ಲಿ ತಂಡವೊಂದು ಇಬ್ಬರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇನೋಳಿ ಧರ್ಮನಗರದ ಹರೀಶ್‌ ಮತ್ತು ನಂದನ್‌ ಗಾಯಗೊಂಡವರು. ಗಾಯಾಳುಗಳನ್ನು ದೇರಳಕಟ್ಟೆ ಆಸ್ಪ್ರತೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣವನ್ನು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಖಂಡಿಸಿದ್ದು ಜಿಲ್ಲೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು ಕಾನೂನು ವ್ಯವಸ್ಥೆ ವಿಫಲಗೊಂಡಿದೆ, ಕಾಂಗ್ರೆಸ್‌ ರಾಜಕೀಯ ದ್ವೇಷದಿಂದ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸುತ್ತಿರುವುದು ಕಳವಳಕಾರಿಯಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯನ್ನು ವಿಧಿಸದೆ ಇದ್ದಲ್ಲಿ ಪರಿಣಾಮ ಸರಿಯಾಗಿರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here