ವೈದ್ಯಕೀಯ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು (ಶಿವಾಜಿನಗರ): ಶಿವಾಜಿನಗರದ ಸರ್ಕಾರಿ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಜೂ.10ರಂದು ಪತ್ತೆಯಾಗಿದೆ.

ಮೃತರನ್ನು ಬೆಂಗಳೂರಿನ ಲೇಡಿ ಕರ್ಜನ್ ರಸ್ತೆಯಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಾಸ್ಟೆಲ್ ನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಲೋಕೇಂದ್ರ ಕುಮಾರ್ ಸಿಂಗ್ (22) ಎಂದು ಗುರುತಿಸಲಾಗಿದೆ. ರೂಂ ಮೇಟ್ ಗಳು ಮಧ್ಯಾಹ್ನ 3 ಗಂಟೆಗೆ ತರಗತಿಯಿಂದ ಹಿಂದಿರುಗಿ ಬರುವ ವೇಳೆ ಲೋಕೇಂದ್ರ ಅವರ ಕೋಣೆಗೆ ಬೀಗ ಹಾಕಿರುವುದು ಕಂಡು ಬಂತು.  ಕೂಡಲೇ ಬಾಗಿಲು ಒಡೆದು ನೋಡಿದಾಗ ಈತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here