ಮಂಗಳೂರು(ಮೈಸೂರು): ಪ್ರಸಿದ್ಧ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ (93) ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಜೂ.11(ಮಂಗಳವಾರ) ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ತೊಡೆ ಮೂಳೆ ಮುರಿತಕೊಳ್ಳಗಾಗಿದ್ದರು. ನಂತರ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು. ಆದರೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದಾರೆ. ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಅಂತ್ಯಕ್ರಿಯೆ ನಡೆದಿದೆ.