ಸ್ಕೂಟರ್‌ನಲ್ಲಿ ಸಂಚರಿಸಿ ಹೆದ್ದಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಗಳೂರು (ಕಲ್ಲಡ್ಕ): ಕಾಮಗಾರಿ ಹಿನ್ನೆಲೆಯಲ್ಲಿ ಹದಗೆಟ್ಟಿರುವ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಕೂಟರ್‌ನಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ 2-3 ದಿನಗಳಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಬೇಕೆಂದು ತಾಕೀತು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಯವರೇ  ರಸ್ತೆ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ಬಳಿಕ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here