ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆಗೆ ಹಣ ಕೊಡಿ – ಪೊಲೀಸರ ಹೆಸರಿನಲ್ಲಿ ವಂಚನೆ – ದೂರು ದಾಖಲು

ಮಂಗಳೂರು:  ಮಂಗಳೂರಿನ‌ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಹಣಕೊಡಿ ಎಂದು ಕಳೆದೆರಡು ದಿನಗಳಿಂದ ವಾಟ್ಸ್ಆ್ಯಪ್ ಕರೆಗಳು ಬರುತ್ತಿದೆ. ಇದರಿಂದ ಭೀತಿಗೊಳಗಾದ ಕೆಲ ವಿದ್ಯಾರ್ಥಿಗಳ ಪೋಷಕರು ಸೈಬರ್ ಠಾಣೆಯ ಮೆಟ್ಟಿಲೇರಿದ್ದರೆ ಇನ್ನು ಕೆಲವರು ಹಣ ನೀಡಿ ವಂಚನೆಗೊಳಗಾಗಿದ್ದಾರೆ.

ಜೂನ್ 11 ಮತ್ತು 12 ರಂದು ಮಂಗಳೂರಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಹಲವಾರು ವಿದ್ಯಾರ್ಥಿಗಳ ಪೋಷಕರಿಗೆ ಈ ರೀತಿಯ ಬೆದರಿಕೆ ಕರೆಗಳು ಬಂದಿವೆ. ಪೋಲೆಂಡ್ ಮತ್ತು ಪಾಕಿಸ್ತಾನದಂತಹ ವಿದೇಶಿ ಸಂಖ್ಯೆಗಳಿಂದ ವಾಟ್ಸ್ಆ್ಯಪ್ ಮೂಲಕ ಕರೆಗಳು ಬರುತ್ತಿದೆ ಎನ್ನಲಾಗಿದೆ. ಕರೆ ಮಾಡಿರುವ ವ್ಯಕ್ತಿ ತನ್ನನ್ನು ತಾನು ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಹಿಂದಿಯಲ್ಲಿ ಮಾತನಾಡಿದ್ದಾನೆ. ಪೋಷಕರಿಗೆ ನಿಮ್ಮ ಪುತ್ರ ಯಾ ಪುತ್ರಿಯನ್ನು ಬಂಧಿಸಲಾಗಿದೆ. ಅವರನ್ನು ಬಿಡುಗಡೆ ಮಾಡಬೇಕಾದರೆ ಹಣ ಕೊಡುವಂತೆ ಒತ್ತಾಯಿಸಿದ್ದಾನೆ. ಈ ಕರೆಗಳನ್ನು ಶಾಲಾ ಅವಧಿಯಲ್ಲಿ ಮಾಡಲಾಗಿದ್ದು, ಪೋಷಕರನ್ನು ಬೆದರಿಸಿ ಹಣ ವಸೂಲಿ ಮಾಡಲಾಗಿದೆ. ಪರಿಶೀಲನೆ ನಡೆಸಿದಾಗ ಈ ಕರೆಗಳು ಎಲ್ಲವೂ ನಕಲಿಯಾಗಿದ್ದು ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ. ಈ ಬಗ್ಗೆ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here