ನೀಟ್ 2024 -1563 ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕ ರದ್ದು – ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ

ಮಂಗಳೂರು/ಹೊಸದಿಲ್ಲಿ: ನೀಟ್ – ಯುಜಿ 2024 ವಿವಾದಕ್ಕೆ ಸಂಬಂಧಿಸಿದಂತೆ, ಕೇಂದ್ರವು ಗುರುವಾರ ಸುಪ್ರೀಂ ಕೋರ್ಟ್‌ಗೆ 1563 ವಿದ್ಯಾರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ. ‌

ಈ 1563 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಆ ವಿದ್ಯಾರ್ಥಿಗಳು ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಬಯಸದಿದ್ದರೆ, ಮೇ 5 ರಂದು ನಡೆದ ಪರೀಕ್ಷೆಯ ಆಧಾರದ ಮೇಲೆ ಅವರ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ವಕೀಲ ಕನು ಅಗರ್ವಾಲ್ ಅವರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠಕ್ಕೆ ಈ ಮಾಹಿತಿ ನೀಡಿದ್ದಾರೆ. ಜೂನ್ 12 ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರಚಿಸಿದ್ದ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ.

LEAVE A REPLY

Please enter your comment!
Please enter your name here