ಮಂಗಳೂರು (ಬೆಂಗಳೂರು): ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಹಾಗು ನಾಗರತ್ನ ಅವರ ಸಂಸಾರದ ಗಲಾಟೆ ಇಂದು-ನಿನ್ನೆಯದಲ್ಲ. ಕ್ರೌರ್ಯದ ಆಧಾರದಲ್ಲಿ ವಿಜಯ್ ಅವರು ಡಿವೋರ್ಸ್ಗೆ ಕೋರಿದ್ದರು. ಆದರೆ ಪತ್ನಿಯ ಮೇಲಿನ ಆರೋಪಗಳನ್ನು ಸಾಬೀತು ಮಾಡಲು ಸಾಧ್ಯವಾಗದ ಕಾರಣದಿಂದ ದುನಿಯಾ ವಿಜಯ್ ಅವರ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್ನಲ್ಲಿ ದುನಿಯಾ ವಿಜಯ್ ಅವರು ಅರ್ಜಿ ಸಲ್ಲಿಸಿದ್ದರು. ಕ್ರೌರ್ಯದ ಆಧಾರದಲ್ಲಿ ಅವರು ವಿಚ್ಛೇದನ ಕೋರಿದ್ದರು. ಆದರೆ ಪತ್ನಿ ನಾಗರತ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಅವರ ಅರ್ಜಿಯನ್ನು ವಜಾಗೊಳಿಸಿ ಫ್ಯಾಮಿಲಿ ಕೋರ್ಟ್ ಆದೇಶ ಹೊರಡಿಸಿದೆ.