ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು:  ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ನಡೆಯಲಿದ್ದು ಈ ವೇಳೆ ಈ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here