ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌.ಡಿ ಕುಮಾರಸ್ವಾಮಿ, ಇ.ತುಕಾರಾಮ್‌ ಮತ್ತು ಬಸವರಾಜ್‌ ಬೊಮ್ಮಾಯಿ

ಮಂಗಳೂರು (ದೆಹಲಿ): ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿ ಕೇಂದ್ರದ ನೂತನ ಎನ್‌ಡಿಎ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂವಿಧಾನದ ನಿಯಮದಡಿ ಯಾವುದೇ ಒಬ್ಬ ಅಭ್ಯರ್ಥಿ ಏಕಕಾಲಕ್ಕೆ ಎರಡು ಸದನಗಳ ಸದಸ್ಯರಾಗುವಂತಿಲ್ಲ. ಹಾಗಾಗಿ ಕೇಂದ್ರ ಸಚಿವ ಸ್ಥಾನ ಪಡೆದ ಬಳಿಕ ಹೆಚ್ .ಡಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸಚಿವ ಸ್ಥಾನ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಳಿಕ ಬೆಂಗಳೂರಿಗೆ ಆಗಮಿಸಿದ ಹೆಚ್‌.ಡಿ.ಕೆ ತಮ್ಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಇನ್ನೊಂದೆಡೆ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆಗೆ ಸಂಸದರಾಗಿ ಆಯ್ಕೆಯಾದ ಇ. ತುಕಾರಾಮ್‌ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಇ ತುಕಾರಾಮ್‌ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಸಂಸದರಾಗಿ ಆಯ್ಕೆಯಾಗಿದ್ದು, ಸಂಡೂರಿನ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇನ್ನು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಬಸವರಾಜ್‌ ಬೊಮ್ಮಾಯಿ ತಮ್ಮ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here