ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಜೂ.28ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

 

ಮಂಗಳೂರು/ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ವಿರುದ್ಧ ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ  ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು.ಸಭೆಯಲ್ಲಿ , ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಸುದೀರ್ಘ ಅವಧಿಯ ನಂತರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

LEAVE A REPLY

Please enter your comment!
Please enter your name here