ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ-ಮುಂದೂಡಿಕೆಯಾದ ಜಾಥಾ ,ಅಭಿನಂದನಾ ಕಾರ್ಯಕ್ರಮ

ಶಿವಮೊಗ್ಗ/ಮಂಗಳೂರು: ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.

ಭಾನುಪ್ರಕಾಶ್ ಅವರ ನಿಧನದಿಂದಾಗಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಡೆಯಬೇಕಿದ್ದ ಜಾಥಾ ,ಅಭಿನಂದನಾ ಕಾರ್ಯಕ್ರಮ ಮುಂದೂಡಲಾಗಿದೆ. ಈ ಕುರಿತಾಗಿ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು ಗುರುತಿಸಿಕೊಂಡರು. ಬಿಜೆಪಿ ಎಂ.ಬಿ ಭಾನುಪ್ರಕಾಶ್​ ಅವರನ್ನು ವಿಧಾನ್​ ಪರಿಷತ್​ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಮಾಡಿತ್ತು. ಸರಳ, ಸಜ್ಜನರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು ಉತ್ಮಮ ವಾಗ್ಮಿಯಾಗಿದ್ದರು. ಇವರು 2001 ರಿಂದ 2005ರ ತನಕ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ವಿಧಾನ ಪರಿಷತ್​ ಸದಸ್ಯಾರಾಗಿ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here