ಮಂಗಳೂರು/ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂ.17) ಅಪರಾಧ ತನಿಖಾ ಇಲಾಖೆ(ಸಿಐಡಿ)ಯ ವಿಚಾರಣೆಗೆ ಹಾಜರಾಗಿದ್ದಾರೆ.
ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ(ಜೂ.14) ಸಿಐಡಿಗೆ ತಡೆಯಾಜ್ಞೆ ನೀಡಿದೆ.