ಮಂಗಳೂರು/ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಸಂಬಂಧ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಭವಾನಿ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿತ್ತು. ಇದೀಗ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ.