ಜೂನ್​ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಇಂದಿನಿಂದ(ಜೂ.18) ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಜೂನ್​ 22ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು, ಇದೀಗ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿಯೂ ಮಳೆಯಾಗಲಿದೆ.

LEAVE A REPLY

Please enter your comment!
Please enter your name here