ಮಂಗಳೂರು/ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.